ಶಿರ್ವ: ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು.

ಶಿರ್ವ: ಬ್ಯಾಂಕಿನ ಎರಡನೇ ಮಹಡಿಯಿಂದ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರ್ವದಲ್ಲಿ ನ.11ರಂದು ನಡೆದಿದೆ.

ಮೃತರನ್ನು ಬೆಳಪು ಗ್ರಾಮದ ಮೋಹನ್ ಆಚಾರ್ಯ(52) ಎಂದು ಗುರುತಿಸಲಾಗಿದೆ.

ಇವರು ಬೆಳಗ್ಗೆ ಶಿರ್ವ ಗ್ರಾಮದ ಕೆನರಾ ಬ್ಯಾಂಕ್ ನ ಎರಡನೇ ಮಹಡಿಯಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದರೆನ್ನಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಇವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.