ಉಡುಪಿ: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅವರ ನೇತೃತ್ವದಲ್ಲಿ ಇಂದು ಉಡುಪಿ ಬಿಜೆಪಿ ಕಚೇರಿಯ ಎದುರು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಷ್ಟ್ರೀಯ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ,ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್, ರೈತ ಮೋರ್ಚಾದ ಅಧ್ಯಕ್ಷ ಪ್ರವೀಣ್ ಗುರ್ಮೆ, ಕಾಪು ಮಂಡಲದ ಅಧ್ಯಕ್ಷ ಶ್ರೀಕಾಂತ್ ನಾಯಕ್.
ಜಿಲ್ಲಾ ಮಹಿಳಾ ಮೋರ್ಚಾದ ಪ್ರಭಾರಿಗಳಾದ ಸುನಿತಾ ನಾಯ್ಕ್, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಪ್ರಮೀಳಾ ಹರೀಶ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರೇಶ್ಮಾ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರರಾದ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್, ಗಿರೀಶ್ ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ರಮಾ ಶೆಟ್ಟಿ, ವಿದ್ಯಾ ಪೈ, ರಜನಿ ಹೆಬ್ಬಾರ್, ಕಾರ್ಯದರ್ಶಿಗಳಾದ ರೇಣುಕಾ, ನೀರಜ ಶೆಟ್ಟಿ, ಪೂರ್ಣಿಮ ರತ್ನಾಕರ್, ಕೋಶಾಧಿಕಾರಿ ಮಾಯಾ ಕಾಮತ್, ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರುಗಳಾದ ವಸಂತಿ ಸತೀಶ್ ಪೂಜಾರಿ, ಸುಮಾ ಶೆಟ್ಟಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಮಂಡಲದ ಪದಾಧಿಕಾರಿಗಳು, ಶಕ್ತಿ ಕೇಂದ್ರದ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.