ನವದೆಹಲಿ: ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿ ಮತ್ತೊಮ್ಮೆ ಅಚ್ಚರಿಯ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಆರ್ ಎಸ್ ಎಸ್ ಸಕ್ರೀಯ ಕಾರ್ಯಕರ್ತ, ಮಂಗಳೂರು ಮೂಲದ ಉದ್ಯಮಿ ಡಾ. ಕೆ. ನಾರಾಯಣ್ ಅವರಿಗೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ರಾಜಸಭಾ ಟಿಕೆಟ್ ನೀಡಿದೆ. ಆ ಮೂಲಕ
ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ಮಣೆಹಾಕಿದೆ. ಅಲ್ಲದೆ, ರಾಜ್ಯ ಬಿಜೆಪಿ ನಾಯಕರು ಅಂತಿಮಗೊಳಿಸಿ ಕಳುಹಿಸಿದ್ದ ಮೂವರು ಅಭ್ಯರ್ಥಿಗಳನ್ನು ಬಿಜೆಪಿ ಹೈಕಮಾಂಡ್ ತಿರಸ್ಕರಿಸುವ ಮೂಲಕ ರಾಜ್ಯ ನಾಯಕರಿಗೆ ಬಿಗ್ ಶಾಕ್ ನೀಡಿದೆ.
ಡಾ. ನಾರಾಯಣ್ ಅವರಿಗೆ ಟಿಕೆಟ್ ನೀಡುವ ಮೂಲಕ ದೇವಾಂಗ ಸಮುದಾಯಕ್ಕೆ ಮನ್ನಣೆ ನೀಡಲಾಗಿದೆ.