ಇಲ್ಲಿದೆ ಕಿರುಚಿತ್ರ ಸ್ಪರ್ಧೆ:ಆಸಕ್ತರು ಭಾಗವಹಿಸಿ

ಉಡುಪಿ : ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲಶಕ್ತಿ ಮಂತ್ರಾಲಯವು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆಗಸ್ಟ್ 15 ರ ವರೆಗೆ ರಾಷ್ಟಿಯ ಸ್ವಚ್ಛತಾ ಫಿಲ್ಮೋಂ ಕಾ ಅಮೃತ್ ಮಹೋತ್ಸವ (ಅಜಾದ್ ಕಾ ಅಮೃತ್ ಮಹೋತ್ಸವ) ಎಂಬ ಹೆಸರಿನಡಿ ರಾಷ್ಟ ಮಟ್ಟದ ಕಿರುಚಿತ್ರ ಸ್ಪರ್ಧೆಯನ್ನು ಆಯೋಜಿಸಿದೆ.

ಕಿರುಚಿತ್ರ ಸ್ಪರ್ಧೆಯು ಎರಡು ವರ್ಗಗಳಲ್ಲಿ ನಡೆಯಲಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಕೆಲಸ ನಿರ್ವಹಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು / ಪಿಎಂಯು ಸದಸ್ಯರು ಮತ್ತು ಅವರ ಸಂಬAಧಿಕರನ್ನು ಹೊರತುಪಡಿಸಿ, 10 ವರ್ಷ ಮೇಲ್ಪಟ್ಟ ನಾಗರೀಕರು ಹಾಗೂ ಸಾಂಸ್ಥಿಕ ವಿಭಾಗದಲ್ಲಿ ಗ್ರಾಮ ಪಂಚಾಯಿತಿಗಳು, ಸಮುದಾಯ ಆಧಾರಿತ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಸ್ವ-ಸಹಾಯ ಸಂಘ ಸಂಸ್ಥೆಗಳು ಸಹ ಈ ಸ್ಫರ್ಧೆಯಲ್ಲಿ ಭಾಗವಹಿಸಬಹುದು.

ವರ್ಷದ ಕೊನೆಯಲ್ಲಿ ನವದೆಹಲಿಯಲ್ಲಿ ನಡೆಯುವ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಸಮಾರಂಭದಲ್ಲಿ ಎರಡು ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿಯನ್ನು ಸಂಪಕಿಸುವಂತೆ ಪ್ರಕಟಣೆ ತಿಳಿಸಿದೆ.