ಬೂದು ನೀರು ನಿರ್ವಹಣೆ ಕುರಿತ ಕಿರು ಚಿತ್ರ ನಿರ್ಮಾಣ ಸ್ಪರ್ಧೆ

ಉಡುಪಿ: ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮೀಣ ಭಾಗದ
ಜನವಸತಿ ಪ್ರದೇಶಗಳಲ್ಲಿ ಬೂದು ನೀರು ನಿರ್ವಹಣೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜೀವ ಜಲ-ಜಲ ನಿಧಿ ವಿಷಯದ ಬಗ್ಗೆ ಕಿರುಚಿತ್ರ ನಿರ್ಮಾಣ ಸ್ಪರ್ಧೆಯನ್ನು ಕನ್ನಡ, ತುಳು ಹಾಗೂ ಆಂಗ್ಲ ಭಾಷೆಯಲ್ಲಿ ಆಯೋಜಿಸಲಾಗಿದೆ.

ಸಿದ್ಧಪಡಿಸಿದ ವೀಡಿಯೋಗಳನ್ನು ಸ್ವಚ್ಛ ಭಾರತ್ ಮಿಷನ್ (ಗ್ರಾ) ಇ-ಮೇಲ್ nbaudp@gmail.com ಗೆ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನ. ಪ್ರಶಸ್ತಿಯು ನಗದು ಬಹುಮಾನ ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9964443064 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ
ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.