ಉಡುಪಿ: ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ ಸುಮಾರು16,50,000 ರೂ. ಮೊತ್ತದ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ಆ.9 ರಂದು ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಲಾಯಿತು.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನಿಲ್ ಕುಮಾರ್ ಹಾಗೂ ಶಾಸಕ ಕೆ. ರಘುಪತಿ ಭಟ್ ಅವರ ಸಮ್ಮುಖದಲ್ಲಿ ಅಂಬ್ಯುಲೆನ್ಸ್ ಹಾಸ್ತಾಂತರಿಸಲಾಯಿತು.
ಶಾಸಕ ಕೆ. ರಘುಪತಿ ಭಟ್ ಅವರು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕಾರಿಯಾಗಲು ಆಂಬುಲೆನ್ಸ್ ನ ಅಗತ್ಯತೆ ಬಗ್ಗೆ ಶ್ರೀ ಲಕ್ಷ್ಮೀವೆಂಕಟೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಲೀ.ಗೆ ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷರಾದ ಎಂ. ಶ್ರೀನಿವಾಸ್ ಭಟ್, ಮತ್ಸ್ಯೋದ್ಯಮಿಗಳಾದ ಹರಿಯಪ್ಪ ಕೋಟ್ಯಾನ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಮತ್ತು ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.












