ಮಂಗಳೂರು: ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಇವರ ಪ್ರೋತ್ಸಾಹದೊಂದಿಗೆ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಬಡಗುತಿಟ್ಟಿನ ಪ್ರಸಿದ್ಧ ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳದವರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನವಾಗಿ ‘ಕೃಷ್ಣ ಗಾರುಡಿ’ ಮತ್ತು ‘ಜಾಂಬವತಿ’ ಎಂಬ ಕಥಾನಕ ಪ್ರದರ್ಶನವು ಜನವರಿ 22 ರಂದು ಸಂಜೆ 4 ರಿಂದ ರಾತ್ರಿ 10 ರವರೆಗೆ ಕೊಡಿಯಾಲ್ ಬೈಲ್ ಕುದ್ರೋಳಿ ಶ್ರೀ ಭಗವತೀ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ‘ಬಳ್ಕೂರು ಯಕ್ಷ ಕುಸುಮ’ ಪುರಸ್ಕಾರವನ್ನು ಕಲಾವಿದರಾದ ಹಳ್ಳಾಡಿ ಜಯರಾಮ್ ಶೆಟ್ಟಿ ಮತ್ತು ಮೇಳದ ಸಂಚಾಲಕರಾದ ರಂಜಿತ್ ಕುಮಾರ್, ವಕ್ವಾಡಿ ಇವರಿಗೆ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರಿನ ಹಿರಿಯ ಲೆಕ್ಕ ಪರಿಶೋಧಕ ಎಸ್ ಎಸ್ ನಾಯಕ್, ಮಂಗಳೂರು ರಂಗಸ್ಥಳ ಸಂಸ್ಥೆಯ ಎಸ್ ಎಲ್ ನಾಯಕ್ ಮತ್ತು ದಿನೇಶ್ ಪೈ, ಮಂಗಳೂರಿನ ಹಿರಿಯ ಲೆಕ್ಕ ಪರಿಶೋಧಕ ಸಿಎ ಶಾಂತರಾಮ ಶೆಟ್ಟಿ, ಕುದ್ರೋಳಿ ಶ್ರೀ ಭಗವತೀ ದೇವಸ್ಥಾನದ ಅಧ್ಯಕ್ಷ ಗಣೇಶ್ ಕುಂಟಲ್ಪಾಡಿ, ಮಂಗಳೂರು ಕೆ.ಎಂ.ಸಿ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಅಣ್ಣಯ್ಯ ಕುಲಾಲ್, ಉಳ್ತೂರು, ಪಮ್ಮಿ, ಕೊಡಿಯಾಲ್ ಬೈಲ್, ಮಂಗಳೂರು ಇವರು ಭಾಗವಹಿಸಲಿದ್ದಾರೆ ಎಂದು ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನದ ಪರವಾಗಿ ಕರುಣಾಕರ ಬಳ್ಕೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.