ಶ್ರೀ ಶಾರದಾ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಣಿಪಾಲ – 100% ಉದ್ಯೋಗ ಭರ್ತಿ; 2026-27 ಸಾಲಿನ ಪ್ರವೇಶಾತಿ ಆರಂಭ.

ಮಣಿಪಾಲ: ಕಳೆದ 14 ವರ್ಷಗಳಿಂದ ಕಾರ್ಯಚರಿಸುತ್ತಿರುವ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಣಿಪಾಲ, 2025-26 ಸಾಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಉಡುಪಿ ಸುತ್ತಮುತ್ತಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ 100% ಉದ್ಯೋಗ ಲಭಿಸಿದೆ. ಇನ್ನೂ ಹಲವಾರು ಶಾಲೆಗಳಲ್ಲಿ ಶಿಕ್ಷಕಿಯರ ಅವಶ್ಯಕತೆಯಿದ್ದು, ಆಸಕ್ತರು ಈ ಸಂಸ್ಥೆಯ ಪ್ರಾಂಶುಪಾಲರನ್ನು ಭೇಟಿ ಮಾಡಬಹುದು.

ಕೇವಲ ತರಬೇತಿ ಮಾತ್ರವಲ್ಲದೆ, ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಗರಿಷ್ಠ ಉದ್ಯೋಗ ದೊರಕಿಸುವ ಏಕೈಕ ಸಂಸ್ಥೆಯಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ಸಂಸ್ಥೆಯು, ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರವನ್ನು ನೀಡುತ್ತದೆ.

ಈ ಕೋರ್ಸಿಗೆ ಪ್ರವೇಶಾತಿ (2026-27)ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದು.

ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಡಿ.ಸಿ. ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿಯಲ್ಲಿರುವ ಸಂಸ್ಥೆ (9901722527 – [email protected])ಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿರುತ್ತದೆ.