ವಾಲಿಬಾಲ್ ಪಂದ್ಯಾಟ: ಶ್ರೀ ವೆಂ.ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಕಲ್ಪಿತಾ ಮತ್ತು ಓಂಕಾರ್ ಪ್ರತಿನಿಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.