ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಅಮೋಘ ಪ್ರದರ್ಶನ: ವಿವಿಧ ಕ್ರೀಡೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪ್ರತಿ ಹೆಜ್ಜೆಯಲ್ಲೂ ಹೊಸತನ ಸಾಧಿಸುವುದರ ಮೂಲಕ ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ಅವಕಾಶ ಕಲ್ಪಿಸಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸಿನ ಪಯಣದಲ್ಲಿ ಸಾಗಿ ಮುನ್ನೆಡೆಯಬೇಕು ಎನ್ನುವ ಸದುದ್ದೇಶವನ್ನು ಹೊಂದಿರುವ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಶೈಕ್ಷಣಿಕ ಸಾಧನೆಯ ಶಿಖರವನ್ನು ಏರುವುದರ ಜೊತೆಗೆ ಇದೀಗ ಕ್ರೀಡಾಕ್ಷೇತ್ರದಲ್ಲಿಯೂ ಅದ್ಭುತ ಸಾಧನೆಗೈದಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಜ್ವಲ್( ಕರಾಟೆ ), ಮನೀಶ್, ಪ್ರಖ್ಯಾತ್ (ಟೆನ್ನಿಕ್ವಾಯಿಟ್ ), ಶ್ರವಣ್ ( ಫುಟ್ಬಾಲ್ ), ಓಂಕಾರ್ ( ಈಟಿ ಎಸೆತ ), ಆತ್ಮಕ್, ದರ್ಶನ್ (ಕುಸ್ತಿ ), ಧಾರಿಣಿ, ಆತ್ಮಿಕಾ ಉಪಾಧ್ಯಾಯ ( ಶಟಲ್ ಬ್ಯಾಡ್ಮಿಂಟನ್ ), ಅನಿರುದ್ಧ ( ಚೆಸ್ ), ಸಾಹಿಲ್ (ಕಬಡ್ಡಿ) ಆಯ್ಕೆಯಾದ ವಿದ್ಯಾರ್ಥಿಗಳು.

ಅತ್ಯಪೂರ್ವ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ, ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದರು.