ಕರಾಟೆ ಪಂದ್ಯಾಟ : ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಮಲ್ಲೇಶ್ವರಂ, ಬೆಂಗಳೂರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ರಾವ್ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.