ಸಾರಿಗೆ ನೌಕರರ ದಿಢೀರ್ ಮುಷ್ಕರ: ಪ್ರಯಾಣಿಕರ ಪರದಾಟ

ಬೆಂಗಳೂರು: ಸಾರಿಗೆ ನೌಕರರ ಬೇಡಿಕೆಗೆ ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ನಾಲ್ಕು ನಿಗಮಗಳ ಸಾರಿಗೆ ನೌಕರರು ಇಂದು ಬಸ್‌ಗಳ ಸಂಚಾರ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ. ಬಸ್‌ ಸಂಚಾರ ಇಲ್ಲದ ವಿವಿಧೆಡೆ ಕೆಲಸಕ್ಕೆ ಹೋಗಬೇದ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ‌ವಿಧಾನಸೌಧ ಚಲೋ ನಡೆಸಿದ ನೌಕರರ ಸಂಘದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವುದು ಹಾಗೂ ಯಾವುದೇ ಜನಪ್ರತಿನಿಧಿಗಳು ಬಂದು ಮನವಿ ಸ್ವೀಕರಿಸದೆ ಇರುವುದು ನೌಕರರ ಸಿಟ್ಟಿಗೆ ಕಾರಣವಾಗಿವೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂಬ ಪ್ರಮುಖ ಬೇಡಿಕೆ ಈಡೇರಿಸಬೇಕೆಂಬುವುದು ನೌಕಕರ ಪ್ರಮುಖ ಆಗ್ರಹವಾಗಿದೆ.

ರಾತ್ರಿ ಬೇರೆ ಬೇರೆ ನಿಲ್ದಾಣಗಳಲ್ಲಿ ತಂಗಿರುವ ಬಸ್‌ಗಳು 12 ಗಂಟೆಯ ಒಳಗೆ ಡಿಪೋ ಸೇರಬೇಕಿದೆ. ಡಿಪೋ ಸೇರಿದ ನಂತರ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ನೌಕರರು ತಿಳಿಸಿದ್ದಾರೆ.