ಬಂಟ್ವಾಳ : ಸಿದ್ಧಕಟ್ಟೆ ವಲಯ ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ವತಿಯಿಂದ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ.5 ಮತ್ತು ಅ.6ರಂದು ಸಿದ್ಧಕಟ್ಟೆಯ ಕೇಂದ್ರ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಗುವುದು ಎಂದು ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.
ಅವರು ಗುರುವಾರ ಸಿದ್ಧಕಟ್ಟೆಯ ಹರ್ಷಲಿ ಸಭಾಭವನದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಸಮಿತಿ ಅಧ್ಯಕ್ಷ ಲೋಕೇಶ್ ಶೆಟ್ಟಿ ಮೊಯಿಲೊಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್. ಮಂಜಿಲ ಮಾತನಾಡಿದರು.
ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಪದ್ಮಶೇಖರ ಜೈನ್, ಗೌರವ ಸಲಹೆಗಾರರಾದ ಮಾಯಿಲಪ್ಪ ಸಾಲ್ಯಾನ್, ಬೇಬಿ ಕುಂದರ್, ಗೋಪಾಲ ಬಂಗೇರ, ಸ್ವಾಗತ ಸಮಿತಿ ಸಂಚಾಲಕ ಶಿವಾನಂದ ರೈ, ಸಮಿತಿಯ ಸಂಘಟನಾ ಕಾರ್ಯದರ್ಶಿ ದಿನೇಶ್ ಸುಂದರ ಶಾಂತಿ ಹಾಗೂ ನಾನಾ ಸಮಿತಿಯ ಸದಸ್ಯರು ಮತ್ತಿತರರು ಇದ್ದರು. ಪ್ರಧಾನ ಸಂಚಾಲಕ ಜಗದೀಶ ಕೊಯಿಲ ಕಾರ್ಯಕ್ರಮ ನಿರೂಪಿಸಿದರು.