ಉಡುಪಿ: ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಕುಮಾರಸ್ವಾಮಿ ಅವರಿಗೆ ಶ್ರೀರಾಮನೇ ಬುದ್ಧಿ ಕೊಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಕೋಟದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹದ ವಿಚಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು.
ಸುಪ್ರೀಂ ಕೋರ್ಟ್ ರಾಮಮಂದಿರ ನಿರ್ಮಾಣಕ್ಕೆ ಅಸ್ತು ಎಂದಿದೆ. ಅದರ ಹೊರತಾಗಿಯೂ ಜವಾಬ್ದಾರಿ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ವಿಶ್ವದಾದ್ಯಂತ ಶತಕೋಟಿ ಭಾರತಿಯರು ದೇಣಿಗೆ ನೀಡುವ ಮೂಲಕ ಮಂದಿರ ನಿರ್ಮಾಣಕ್ಕೆ ಕೈಜೋಡಿಸಿದ್ದಾರೆ ಎಂದರು.