ಬೆಂಗಳೂರು: ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜಿ ಪರಮೇಶ್ವರ, ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹಮದ್ ಖಾನ್ ಸೇರಿದಂತೆ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಎನ್ಸಿಪಿ ನಾಯಕ ಶರದ್ ಪವಾರ್, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.