ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತ ರತ್ನ ಪಡೆಯಲು ಸಾವರ್ಕರ್ಗಿಂತ ಅರ್ಹ ವ್ಯಕ್ತಿ ಮತ್ತೊಬ್ಬರಿಲ್ಲ ಎಂಬ ಹೇಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗಾಂಧೀಜಿ ಹತ್ಯೆ ಮಾಡಲು ಯೋಜನೆ ರೂಪಿಸಿದ್ದೇ ಸಾವರ್ಕರ್. ನಾಥೂರಾಮ್ ಗೋಡ್ಸೆ ಹಿಂದೆ ನಿಂತು ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದ್ದರು. ಸೂಕ್ತ ಸಾಕ್ಷಿ ಇಲ್ಲದೇ ಆರೋಪಿಯಾಗಿ ಗುರುತಿಸಿರಲಿಲ್ಲ. ಅಂತಹ ವ್ಯಕ್ತಿಗೆ ಕೇಂದ್ರ ಸರ್ಕಾರ ಭಾರತ ರತ್ನ ಕೊಡಲು ಮುಂದಾಗಿದೆ. ಹಾಗೆಯೇ ಗೋಡ್ಸೆಗೂ ಭಾರತ ರತ್ನ ಕೊಟ್ಟು ಬಿಡಲಿ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.