ಚೆನ್ನೈ: ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಬಹಳಷ್ಟು ಚೇತರಿಕೆ ಕಂಡಿದೆ. ಅವರು ನಿನ್ನೆಗಿಂತಲೂ ಇಂದು ವೈದ್ಯರ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ’ ಎಂದು ಎಸ್ಪಿಬಿ ಪುತ್ರ ಎಸ್.ಪಿ. ಚರಣ್ ವಿಡಿಯೊ ಸಂದೇಶದ ಮೂಲಕ ತಿಳಿಸಿದ್ದಾರೆ.
ಆಗಸ್ಟ್ 5ರಂದು ಕೋವಿಡ್ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಎಸ್ಪಿಬಿ ಚೆನ್ನೈನ ಎಂಜಿಎಂ ಹೆಲ್ತ್ಕೇರ್ಗೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಅವರ ಕೋವಿಡ್ ವರದಿ ಕೂಡ ನೆಗೆಟಿವ್ ಬಂದಿತ್ತು.