ಬೆಂಗಳೂರು:ಇನ್ಮುಂದೆ ರಾಜ್ಯದ ಮಲ್ಟಿಪ್ಲೆಕ್ಸ್ ಗಳಲ್ಲಿ ಜಾಸ್ತಿ ಟಿಕೇಟ್ ದರ ತೆಗೆದುಕೊಳ್ಳುವಂತಿಲ್ಲ. ರಾಜ್ಯ ಸರಕಾರದ ದರವನ್ನು ಫಾಲೋ ಮಾಡಬೇಕಾಗುತ್ತದೆ ಹಾಗಾಗಿ ಮಲ್ಟಿಪ್ಲೆಕ್ಸ್ ಥಿಯೇಟರ್ಗಳಲ್ಲಿ ನಡೆಯುತ್ತಿದ್ದ ಟಿಕೇಟ್ ಲೂಟಿಗೆ ಕೊನೆಗೂ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿರುವುದು ಸಿನಿಮಾ ಪ್ರೇಮಿಗಳಲ್ಲಿ ಖುಷಿ ಮೂಡಿಸಿದೆ.
ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ, ಎಲ್ಲಾ ಭಾಷಯ ಚಿತ್ರಗಳಿಗೆ ಹಾಗೂ ಎಲ್ಲಾ ಪ್ರದರ್ಶನಕ್ಕೆ ಎಲ್ಲಾ ರೀತಿಯ ತೆರಿಗೆ ಹೊರತುಪಡಿಸಿ ಟಿಕೆಟ್ ದರ ರೂ. ಮೀರದಂತೆ ಆದೇಶದಲ್ಲಿ ತಿಳಿಸಿದೆ. 75 ಆಸನಗಳು ಅಥವಾ ಅದಕ್ಕಿಂತ ಕಡಿಮೆ ಆಸನಗಳ ಪ್ರಿಮಿಯಂ ಸೌಲಭ್ಯವಿರುವ ಬಹುಪರದೆ ಚಿತ್ರ ಮಂದಿರಗಳನ್ನು ನಿಗದಿಪಡಿಸಿರುವ 200 ರೂ.ಗಳ ಗರಿಷ್ಠ ಟಿಕೆಟ್ ದರ ಮಿತಿಯಿಂದ ಹೊರಗಿಟ್ಟಿದೆ.












