ಮಂಗಳೂರು: ರಾಷ್ಟ್ರಾದ್ಯಂತ ಸುದ್ದಿಯಲ್ಲಿರುವ ಧರ್ಮಸ್ಥಳದಲ್ಲಿ ಹೆಣ ಹೂಳಲಾಗಿದೆ ಎನ್ನಲಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್ ಐಟಿ ತಂಡ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಸಂಖ್ಯೆ 39/2025ಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರದಲ್ಲಿ ಕಚೇರಿ ಆರಂಭಿಸಿದೆ.
ಈ ಪ್ರಕರಣದ ಬಗ್ಗೆ ಎಸ್‌ಐಟಿಯನ್ನು ಸಂಪರ್ಕಿಸಲು ಅಥವಾ ಮಾಹಿತಿ ನೀಡಲು ಸಹಾಯವಾಣಿಯನ್ನೂ ಆರಂಭಿಸಲಾಗಿದೆ.
ಎಸ್‌ಐಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ, ಮಲ್ಲಿಕಟ್ಟೆ, ಕದ್ರಿ, ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ (ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ).
ದೂರವಾಣಿ ಸಂಖ್ಯೆ: 0824–2005301
ಮೊಬೈಲ್/ವಾಟ್ಸ್ಆ್ಯಪ್ ಸಂಖ್ಯೆ: 8277986369
ಇ–ಮೇಲ್: [email protected]












