ಯಾದಗಿರಿ: ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ ಆರು ಮಂದಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ.
ಮೃತರನ್ನು ಭೀಮರಾಯ ಸುರಪುರ (45), ಶಾಂತಮ್ಮ ಸುರಪುರ (36), ಸುಮಿತ್ರಾ (12), ಶ್ರೀದೇವಿ (13), ಶಿವರಾಜ (9), ಲಕ್ಷ್ಮೀ (4) ಎಂದು ಗುರುತಿಸಲಾಗಿದೆ.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಭೀಮರಾಯ ಅವರು ವಿಪರೀತ ಸಾಲ ಮಾಡಿಕೊಂಡಿದ್ದರು. ಅದನ್ನು ತೀರಿಸಲಾಗದೇ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ಈಜುಗಾರರು ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ ಎಂದು ತಿಳಿದುಬಂದಿದೆ.