ಎನ್‌ಡಿಎ ಪ್ರವೇಶ ಪರೀಕ್ಷೆ: ಎಕ್ಸ್ ಪರ್ಟ್ ಕಾಲೇಜಿನ 6 ವಿದ್ಯಾರ್ಥಿಗಳು ಆಯ್ಕೆ

ಮಂಗಳೂರು: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಆರು ವಿದ್ಯಾರ್ಥಿಗಳು ಅರ್ಹತೆ ಪಡೆದು, ಮುಂದಿನ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ.

ಮೈಸೂರಿನ ಪ್ರಥಮ್ ಎಂ.ಕೆ., ಚಿರಂತ್ ಎಸ್., ಹಾಸನದ ಪಾಯಲ್ ಕವಾರ್ ಸೆಪ್ಟೆಂಬರ್ 4 ರಂದು ನಡೆದ ಲಿಖಿತ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಏಪ್ರೀಲ್ ತಿಂಗಳಿನಲ್ಲಿ ನಡೆದ ಪರೀಕ್ಷೆಯಲ್ಲಿ ಬೀದರ್‌ನ ಶರಣ್ ಕೃಷ್ಣ ಕೊಂಡಿ, ಮಡಿಕೇರಿಯ ಸಿ.ಪಿ. ಕರಿಯಪ್ಪ, ಬೆಂಗಳೂರಿನ ಶ್ರೀಹರ್ಷ ದೇವನ ಅವರು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಒಟ್ಟು ಆರು ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ.

ಈ ಎಲ್ಲ ವಿದ್ಯಾರ್ಥಿಗಳು ಅಭಿನಂದನೆಗೆ ಅರ್ಹರು ಎಂದು ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಅವರು ತಿಳಿಸಿದ್ದಾರೆ.