udupixpress
Home Trending ಗೋಡೆ ಕುಸಿದು ಆರು ವರ್ಷದ ಬಾಲಕಿ ಸಾವು

ಗೋಡೆ ಕುಸಿದು ಆರು ವರ್ಷದ ಬಾಲಕಿ ಸಾವು

ಚಿತ್ರದುರ್ಗ: ಧಾರಾಕಾರವಾಗಿ ಸುರಿದ ಮಳೆಯಿಂದ ಗೋಡೆ ಕುಸಿದು ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಚಳ್ಳೆಕೆರೆ ತಾಲ್ಲೂಕಿನ ಜಾಜೂರು ಗ್ರಾಮದಲ್ಲಿ ಸಂಭವಿಸಿದೆ.

ಮೃತ ಬಾಲಕಿಯನ್ನು ಚಲ್ಮೇಶ ಮತ್ತು ಲಕ್ಷ್ಮೀದೇವಿ ದಂಪತಿಯ ಪುತ್ರಿ ಸೃಜನಾ (6) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಿದ್ದಾಗ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ ಎಂದು ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ ತಿಳಿಸಿದ್ದಾರೆ.