SM Krishna: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ

ಬೆಂಗಳೂರು: ಮಾಜಿ ಸಿಎಂ ಎಸ್.‌ ಎಂ ಕೃಷ್ಣ  (92)  ಮಂಗಳವಾರ (ಡಿ.10 ರಂದು) ನಸುಕಿನ ಜಾವ 2:30ರ ವೇಳೆಗೆ ವಿಧಿವಶರಾಗಿದ್ದಾರೆ.

ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.