ಉಡುಪಿ: ಶ್ರೀಮತಿ ಪೂರ್ಣಿಮಾ ಹಾಗೂ ಕಿರಣ್ ಕುಮಾರ್ ಬೈಲೂರು ದಂಪತಿಯ ಪುತ್ರ ಸ್ಮಿತ್ ಕೆ ಕುಂದರ್ ಅವರು ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ವತಿಯಿಂದ ನಡೆದ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಮತ್ತು ತೃತೀಯ ಪಡೆದು, ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅವರು ವಿದ್ಯೋದಯ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಆಗಿದ್ದು ಲಕ್ಷ್ಮೀನಾರಾಯಣ ಉಪಾಧ್ಯ ಅವರ ಹತ್ತಿರ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾರೆ.ಸ್ಮಿತ್ ಅವರ ಈ ಸಾಧನೆಗೆ ಕುಟುಂಬಸ್ಥರು, ಶಿಕ್ಷಕರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.















