ಯನಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ಯ ಎನ್ ಅನ್ವೇಷಣೆ ಸ್ಪರ್ಧೆಯಲ್ಲಿ ಎಸ್ಎಂಎಸ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ.

ಮಂಗಳೂರು: ಎನ್ಎಪಿಎ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಂಗಳೂರು ಇವರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ 15ಕ್ಕೂ ಹೆಚ್ಚು ಸ್ಪರ್ಧೆಗಳಲ್ಲಿ ಎಸ್ಎಂಎಸ್ ಪದವಿಪೂರ್ವ ಕಾಲೇಜು, ಬ್ರಹ್ಮಾವರದ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ವಿಭಾಗಗಳಲ್ಲಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿಯವರು ಹಾಗೂ ಉಪನ್ಯಾಸಕರು ಶುಭಾಶಯಗಳನ್ನು ಹಾರೈಸಿದ್ದಾರೆ.ವಿದ್ಯಾರ್ಥಿಗಳನ್ನು ಸ್ಪರ್ಧೆಗೆ ಸನ್ನದ್ಧರನ್ನಾಗಿಸಲು ಭೌತಶಾಸ್ತ್ರ ಉಪನ್ಯಾಸಕರಾದ ರವಿರಾಜ್ ನಕ್ಷತ್ರಿ ಅವರು ತರಬೇತಿ ನೀಡಿದ್ದರು.