ಮಂಗಳೂರು: ಬಿಳಿ ಬಣ್ಣದ ಅಪರೂಪದ” ಆಲ್ಟಿನೊ” ಹೆಬ್ಬಾವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾವಳಕಟ್ಟೆ ಎಂಬಲ್ಲಿ ಕಾಣಿಸಿಕೊಂಡಿದ್ದು, ಸುರಕ್ಷಿತವಾಗಿ ಹಿಡಿದು ಪಿಲಿಕುಳ ನಿಸರ್ಗಧಾಮಕ್ಕೆ ಬಿಡಲಾಗಿದೆ. ಬಂಟ್ವಾಳದ ಕಾವಳಕಟ್ಟೆ ನಿವಾಸಿ ನೌಶಾದ್ ಎಂಬವರ ಮನೆಯಲ್ಲಿ ಬಿಳಿ ಹೆಬ್ಬಾವು ಕಾಣಸಿಕೊಂಡಿದ್ದು, ನಂತರ ಉರಗತಜ್ಞ ಸ್ನೇಕ್ ಕಿರಣ್ ಅವರಿಗೆ ಹಾವಿನ ಬಗ್ಗೆ ತಿಳಿಸಿದಾಗ ಅವರು ಕೂಡಲೇ ಸ್ಥಳಕ್ಕೆ ಬಂದು ಸುರಕ್ಷಿತವಾಗಿ ಹಾವನ್ನು ಹಿಡಿದು ಅರಣ್ಯ ಇಲಾಖೆಯ ಗಮನಕ್ಕೆ ತಂದು, ಅವರ ಅದೇಶದಂತೆ ಪಿಲಿಕುಳಕ್ಕೆ ನಿಸರ್ಗ ದಾಮಕ್ಕೆ ನೀಡಿದ್ದಾರೆ .
ಇಂತಹ ಬಿಳಿ ಬಣ್ಣದ ಉರಗಗಳು ಬಲು ಅಪರೂಪವಾಗಿ ಕಾಣಸಿಗುತ್ತವೆ , ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಎರಡನೇ ಹಾವು ಸಿಕ್ಕಿರುವುದು . ಹೆಚ್ಚು ಕಡಿಮೆ 20 ಸಾವಿರ ಉರಗಗಳ ಜನನದಲ್ಲಿ ಒಂದು ಮಾತ್ರ ಇಂತಹ ಬಿಳಿ ಬಣ್ಣದ ಹಾವು ಜನನವಾಗುತ್ತದೆ . ಈ ಜೀವಗಳು ಹುಟ್ಟುವಾಗ ಚರ್ಮದ ವರ್ಣದ್ರವ್ಯದ ( pigment ) ಕೊರತೆ ಯಿಂದ ಹುಟ್ಟುತ್ತವೆ . ಅದರಿಂದ ಇಂತಹ ಜೀವಿಗಳಿಗೆ ” ಆಲ್ಟಿನೊ ” ( albino ) ಎನ್ನುತ್ತಾರೆ . ಇಂತಹ ಬಿಳಿ ಬಣ್ಣದ ಹಾವು ಹೆಚ್ಚು ಸಮಯ ಬದುಕುವುದಿಲ್ಲ , ಯಾಕೆಂದರೆ ಉಳಿದ ಹಾವುಗಳು ಇದರ ಬಣ್ಣದ ಮೇಲೆ ಆಕರ್ಷಣೆ ಗೊಳಗಾಗಿ ಇದನ್ನು ತಿಂದು ಬಿಡುತ್ತವೆ . ಆದರೆ ಈ ಹಾವು ಮಾತ್ರ ಇಷ್ಟು ದೊಡ್ಡದಾಗಿ ಬೆಳೆದಿರುವುದು ವಿಶೇಷ ಎನ್ನುತ್ತಾರೆ ಉರಗ ತಜ್ಞ ಸ್ನೇಕ್ ಕಿರಣ್.