ಉಡುಪಿ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶ್ರೀ ಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ- ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕುಮಾರಿ ಸ್ನೇಹ ಎಚ್. ಕೋಟ್ಯಾನ್, ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಕಟೀಲಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾಳೆ.
ಇವಳು ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾದಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾಳೆ. ಈಕೆ ಪರ್ಕಳ ಪ್ರವೀಣಾ ಸುವರ್ಣ ರ ಶಿಷ್ಯೆ ಮತ್ತು ನಿಟ್ಟೂರು ನಾಗವೇಣಿ ಹರೀಶ್ ದಂಪತಿಗಳ ಪುತ್ರಿ.