ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೇ 30 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, ಮಧ್ಯಾಹ್ನ 2.30 ಕ್ಕೆ ಮಣಿಪಾಲದ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ, ಸಂಜೆ 5.30 ರಿಂದ ಉಡುಪಿಯಲ್ಲಿ ವಿವಿಧ ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಕೋಟ ದಲ್ಲಿ ವಾಸ್ತವ್ಯ ಮಾಡಲಿದ್ದಾರೆ.