ತಾಯಿಯನ್ನು ಉಳಿಸಿಕೊಳ್ಳಲು ಆಗುವುದಿಲ್ಲವೆಂದು ನೊಂದ ಮಗ ಆತ್ಮಹತ್ಯೆಗೆ ಶರಣು

ಬಂಟ್ವಾಳ: ತಾಯಿಯ ದಯನೀಯ ಸ್ಥಿತಿಯನ್ನು ಕಂಡು ವಿಚಲಿತನಾದ ಮಗ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ.

ಆನಂತಾಡಿ ಪಂತಡ್ಕ ನಿವಾಸಿ ನೀರಜ್ ಮೃತ ದುರ್ದೈವಿ. ನೀರಜ್ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ವೈದ್ಯರು ಇವರನ್ನ ಮನೆಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ.

ತಾಯಿಯನ್ನು ಉಳಿಸೋದಕ್ಕೆ ಆಗೋದಿಲ್ಲ ಎಂದು ಮಾನಸಿಕವಾಗಿ ನೊಂದ ನೀರಜ್, ಸೋಮವಾರ ವಾಟ್ಸಾಪ್ ನಲ್ಲಿ ‘ ಓ ಯಮ ದೇವನೇ, ಹೆತ್ತ ತಾಯಿ ಸಾಯೋ ಮುನ್ನ , ಕರೆದುಕೋ ಒಮ್ಮೆ ನನ್ನ, ಅಮ್ಮಾ ಕ್ಷಮಿಸು ಎಂದು ಸ್ಟೇಟಸ್ ಹಾಕಿ ಬಳಿಕ ಮೊಬೈಲ್ ಸ್ವಿಚ್‍ಆಫ್ ಮಾಡಿಕೊಂಡಿದ್ದನು.

ಸೋಮವಾರ ರಾತ್ರಿಯಿಡಿ ಹುಡುಕಾಡಿದರೂ ನೀರಜ್ ಪತ್ತೆಯಾಗಿರಲಿಲ್ಲ. ಇಂದು ಬೆಳ್ಳಿಗ್ಗೆ ಪಾಣೆಮಂಗಳೂರಿನ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸ್ಧಳೀಯ ಈಜುಗಾರ ಮೊಹಮ್ಮದ್ ನಂದಾವರ ಹಾಗೂ ತಂಡ, ಬಂಟ್ವಾಳ ಅಗ್ನಿ ಶಾಮಕ ದಳದ ತಂಡ ಹುಡುಕಾಟ ನಡೆಸಿ, ಶವವನ್ನ ಮೇಲಕ್ಕೆ ಎತ್ತಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.