ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಂಗಳವಾರದಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪರವಾಗಿ ನಿಯೋಗದಿಂದ ಆಹ್ವಾನವನ್ನು ಕಳುಹಿಸಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೂ ಆಹ್ವಾನ ಕಳುಹಿಸಲಾಗಿದೆ. ಆದರೆ ಅನಾರೋಗ್ಯ ನಿಮಿತ್ತ ಅವರು ಪಾಲ್ಗೊಳ್ಳಲಾಗುವುದಿಲ್ಲ.
ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ, ಟ್ರಸ್ಟ್ನ ಪದನಿಮಿತ್ತ ಸದಸ್ಯ, ಆರ್ಎಸ್ಎಸ್ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ರಾಮ್ ಲಾಲ್ ಮತ್ತು ವಿಎಚ್ಪಿ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಅವರು ಗಾಂಧಿ ಮತ್ತು ಖರ್ಗೆ ಅವರನ್ನು ಭೇಟಿ ಮಾಡಿ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.