ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ: ಪಕ್ಷದಿಂದ ಮಾಹಿತಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಸ್ತುತ ಕೋವಿಡ್ ನಂತರದ ಇತರ ರೋಗಲಕ್ಷಣಗಳ ಜೊತೆಗೆ ಅವರ ಕೆಳ ಶ್ವಾಸೇಂದ್ರಿಯ ಪ್ರದೇಶದಲ್ಲಿ ಪತ್ತೆಯಾದ ಶಿಲೀಂಧ್ರಗಳ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯನ್ನು ನಿಕಟವಾಗಿ ಗಮನಿಸಲಾಗುತ್ತಿದೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.