ಉಡುಪಿ: ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿಲ್ಲಾ ರೈತ ಮೋರ್ಚಾ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಭಾರತ ಮಾತೆಗೆ ಪುಷ್ಪಾರ್ಚನೆಗೈಯುವ ಮೂಲಕ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು.
ರೈತ ಮೋರ್ಚಾ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಕಾರ್ಯಸೂಚಿಯಂತೆ 75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಜಿಲ್ಲೆಯ 75 ಹಿರಿಯ ಕೃಷಿಕರನ್ನು ಸನ್ಮಾನಿಸುವ ಸತ್ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಹಿರಿಯ ಕೃಷಿಕರಾದ ಪದ್ದು ಪೂಜಾರ್ತಿ ಮತ್ತು ರತಿ ಶೆಡ್ತಿ, ವರಂಗ ಮುನಿಯಾಲು ಬೈಲು (ಕಾರ್ಕಳ ಮಂಡಲ), ರಾಜು ಗಾಣಿಗ ತೆಗ್ಗರ್ಸೆ ಮತ್ತು ಚಂದ್ರಹಾಸ ಸೂಡಾ ಕೆಂಚನೂರು (ಬೈಂದೂರು ಮಂಡಲ) ಅವರನ್ನು ಸನ್ಮಾನಿಸಲಾಯಿತು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾದ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎ.ವಿ. ತೀರ್ಥರಾಮ ಸಮಾರೋಪ ಭಾಷಣ ಮಾಡಿದರು. ಎಫ್.ಪಿ.ಒ ರೈತ ಉತ್ಪಾದಕ ಸಂಘದ ಜಿಲ್ಲಾ ಸಂಚಾಲಕ ನಾಗರಾಜ ರಾವ್ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಹಾಗೂ ಸದಾನಂದ ಉಪ್ಪಿನಕುದ್ರು ರೈತ ಮೋರ್ಚಾ ಕೈಗೊಳ್ಳಬೇಕಾದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಹಾಗೂ ರಾಜ್ಯ ಸಾವಯವ ಕೃಷಿ ನಿರ್ದೇಶಕ ರಾಘವೇಂದ್ರ ರಾವ್ ಉಪ್ಪೂರು, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಸುರೇಂದ್ರ ಬೋಂಟ್ರ ಮುನಿಯಾಲು, ರವಿ ಗಾಣಿಗ ಕೆಂಚನೂರು, ಪ್ರವೀಣ್ ಕುಮಾರ್ ಶೆಟ್ಟಿ, ಐ.ಬಿ. ಅಶೋಕ್ ಶೆಟ್ಟಿ, ಗೋವಿಂದಾಯ ಶೇರಿಗಾರ್, ರೈತ ಮೋರ್ಚಾ ಮಂಡಲ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಕುಂದಾಪುರ, ಸುಧಾಕರ ಕುಲಾಲ್ ಬೈಂದೂರು, ಗುರುನಂದನ್ ನಾಯಕ್ ಕಾಪು, ಜಯಕರ ಪೂಜಾರಿ ಕಾರ್ಕಳ, ಪ್ರವೀಣ್ ಕುಮಾರ್, ಉಡುಪಿ ಗ್ರಾಮಾಂತರ ಉಪಸ್ಥಿತರಿದ್ದರು.
ಸಭೆಯಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಎಲ್ಲಾ ಆರು ಮಂಡಲಗಳ ರೈತ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಧೀರಜ್ ಕೆ.ಎಸ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕಾಂಚನ್ ಸಿದ್ಧಾಪುರ ವಂದಿಸಿದರು.