ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿಯಲ್ಲಿ ಶೇ.60 ಮೇಲ್ಪಟ್ಟ ಅಂಕ ಪಡೆದ ಅರ್ಹ ವಿದ್ಯಾರ್ಥಿಗಳು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಗೆ ಸಲ್ಲಿಸಲು ನವೆಂಬರ್ 16 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ 24×7 ಸಹಾಯವಾಣಿ ಸಂಖ್ಯೆ :8277799990 ಗೆ ಅಥವಾ ಆಯಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಅನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.















