ಮಣಿಪಾಲ: ರಕ್ಷಾಬಂಧನ ಹಬ್ಬದ ಅಂಗವಾಗಿ ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC) ಸಹಯೋಗದಲ್ಲಿ ಒರೇನ್ ಇಂಟರ್‌ನ್ಯಾಷನಲ್ ವತಿಯಿಂದ ಕಾಸ್ಮೆಟಾಲಜಿ ಕೌಶಲಾಭಿವೃದ್ಧಿ ಕೋರ್ಸ್‌ಗಳಿಗೆ ವಿಶೇಷ ರಿಯಾಯಿತಿ ಘೋಷಿಸಲಾಗಿದೆ.
‘ಈ ರಕ್ಷಾಬಂಧನಕ್ಕೆ ಆಕೆಗೆ ಕಾಸ್ಮೆಟಾಲಜಿ ಕೌಶಲ ನೀಡಿ’ ಎಂಬ ಆಶಯದೊಂದಿಗೆ ಈ ವಿಶೇಷ ಕೊಡುಗೆ ನೀಡಲಾಗುತ್ತಿದ್ದು, ಎಲ್ಲಾ ಕೋರ್ಸ್‌ಗಳ ಶುಲ್ಕದಲ್ಲಿ ಗರಿಷ್ಠ ಶೇ.30ರವರೆಗೆ ರಿಯಾಯಿತಿ ಲಭ್ಯವಿದೆ. ಈ ಕೊಡುಗೆ ಆಗಸ್ಟ್ 31ರವರೆಗೆ ಮಾತ್ರ ಮಾನ್ಯವಾಗಿರಲಿದೆ.
ಕಾಸ್ಮೆಟಾಲಜಿ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ಪಡೆದು ಉದ್ಯೋಗಾವಕಾಶಗಳನ್ನು ಪಡೆಯಲು ಹಾಗೂ ಸ್ವಂತ ಉದ್ಯಮ ಆರಂಭಿಸಲು ಆಸಕ್ತಿ ಹೊಂದಿರುವವರಿಗೆ ಈ ಯೋಜನೆ ಸಹಕಾರಿಯಾಗಲಿದೆ. ಕೌಶಲ ಶಿಕ್ಷಣವು ಯುವತಿಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜತೆಗೆ ಆರ್ಥಿಕ ಸ್ವಾವಲಂಬನೆಗೆ ದಾರಿ ಮಾಡಿಕೊಡಲಿದೆ ಎಂದು ಸಂಸ್ಥೆ ತಿಳಿಸಿದೆ.
ಕೋರ್ಸ್ ಪೂರ್ಣಗೊಳಿಸಿದವರಿಗೆ ಪ್ರಮಾಣಪತ್ರವೂ ದೊರೆಯಲಿದ್ದು, ಸೌಂದರ್ಯ ಮತ್ತು ಕಾಸ್ಮೆಟಾಲಜಿ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ +91 81231 65068 ಸಂಖ್ಯೆಯನ್ನು ಸಂಪರ್ಕಿಸಬಹುದು.















