ಉಡುಪಿ: ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣಮಠದಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.
ಕೃಷ್ಣದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಪರ್ಯಾಯ ಅದಮಾರು ಮಠದ ಈಶಪ್ರಿಯ ಸ್ವಾಮೀಜಿ, ಕೃಷ್ಣಾಪುರ ಮಠದ ವಿದ್ಯಾಸಾಗರ ಸ್ವಾಮೀಜಿ, ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ, ಕಿರಿಯ ವಿದ್ಯಾರಾಜೇಶ್ವರ, ಕಾಣಿಯೂರು ಮಠದ ವಿದ್ಯಾವಲ್ಲಭ ಸ್ವಾಮೀಜಿ, ಸೋದೆ ಮಠದ ವಿಶ್ವವಲ್ಲಭ ಸ್ವಾಮೀಜಿ ಜಪ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.
ಅದಮಾರು ಮಠದ ವಿಶ್ವಪ್ರಿಯ ಸ್ವಾಮೀಜಿ ಕುಂಜಾರು ಸಮೀಪದ ಬಾಣತೀರ್ಥ ಮಠದಲ್ಲಿ ವಿಶೇಷ ಜಪ, ಪೂಜೆಯಲ್ಲಿ ಭಾಗವಹಿಸಿದರು. ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ನೀಲಾವರದ ಗೋಶಾಲೆಯಲ್ಲಿ ಜಪ, ಪೂಜೆಯಲ್ಲಿ ಪಾಲ್ಗೊಂಡರು.