ಇನ್ಮುಂದೆ ಹೈವೇನಲ್ಲಿ ಸ್ಪೀಡ್ ಆಗಿ ವಾಹನ ಓಡಿಸಿದ್ರೆ ಬೀಳುತ್ತೇ ಭಾರೀ ದಂಡ.!

ಬೆಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಓವರ್ ಸ್ಪೀಡ್ ನಿಂದ ಆಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಕೇಂದ್ರ ಸಾರಿಗೆ ಇಲಾಖೆ ಮುಂದಾಗಿದೆ.

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೂಕ್ತ ಕ್ಯಾಮರಾಗಳ ಅಳವಡಿಕೆ ಮಾಡಿ ವಾಹನಗಳ ಮೇಲೆ ನಿಗಾ ವಹಿಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲಾ ಹೆದ್ದಾರಿಗಳಲ್ಲೂ ಸಾರಿಗೆ ಇಲಾಖೆ ಕ್ಯಾಮರಾ ಅಳವಡಿಕೆ ಅಗತ್ಯ ತಯಾರಿ ನಡೆಸಿಕೊಂಡಿದೆ. ಆ ಮೂಲಕ ಕೇಂದ್ರ ಸಾರಿಗೆ ಇಲಾಖೆ ಕಠಿಣ ರೂಲ್ಸ್ ಜಾರಿ ಮಾಡಲಿದ್ದು, ವಾಹನ ಸವಾರರು ಚೂರು ಎಡವಿದರೂ ಭಾರೀ ಪ್ರಮಾಣದಲ್ಲಿ ದಂಡ ತೆರಲೇಬೇಕಾಗುತ್ತದೆ.

ಹೌದು, ವಾಹನ ಸವಾರರು ಇನ್ಮುಂದೆ ಎಚ್ಚರಿಕೆಯಿಂದ ಇರಲೇಬೇಕು. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಪೀಡ್​​ ಆಗಿ ವಾಹನ ಓಡಿಸುವ ಮುನ್ನ ಎರಡು ಬಾರಿ ಯೋಚಿಸಬೇಕು. ಯಾವುದೇ ಕಾರಣಕ್ಕೂ ನಮ್ಮನ್ನು ಯಾರು ತಡೆಯೋದಿಲ್ಲ, ನೋಡೋದಿಲ್ಲ ಎಂದು ಬೇಕಾಬಿಟ್ಟಿ ವಾಹನ ಚಲಾಯಿಸೋಕೆ ಆಗುವುದಿಲ್ಲ. ಯಾರಾದರೂ ಒಂದು ವೇಳೆ ನಿಯಮ ಉಲ್ಲಂಘಿಸಿ ಸ್ಪೀಡ್​​ ಆಗಿ ವಾಹನ ಚಲಾಯಿಸಿದರೆ ಮುಂದಿನ ಟೋಲ್​​ನಲ್ಲೇ ಫೈನ್​​ ಕಟ್ಟಬೇಕಾಗುತ್ತದೆ. ನಿಮ್ಮ ಗಾಡಿ ಸಂಖ್ಯೆ ಮತ್ತು ಸ್ಪೀಡ್​​ ಬಗ್ಗೆ ಇಲಾಖೆಗೆ ಕೂಡಲೇ ಮಾಹಿತಿ ರವಾನೆಯಾಗುತ್ತದೆ.