ಉಡುಪಿ: ಸೇವಾಭಾರತಿ ಕನ್ಯಾಡಿ ಹಾಗೂ ದಿವ್ಯಾಂಗ ರಕ್ಷಣಾ ಸಮಿತಿ ಕೊಡವೂರು ಇವರ ವತಿಯಿಂದ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ತಾಲೂಕು ಆರೋಗ್ಯ ಕೇಂದ್ರದಲ್ಲಿ ಬೆನ್ನುಹುರಿ ಅಪಘಾತದ ಬಗ್ಗೆ ಜಾಗೃತಿ ಕಾರ್ಯಾಗಾರವನ್ನು ಆಗಸ್ಟ್ 28 ರಂದು ನಡೆಸಲಾಯಿತು.
ದಿವ್ಯಾಂಗ ರಕ್ಷಣಾ ಸಮಿತಿಯ ಮ್ಯಾನೇಜರ್ ಅಖಿಲೇಶ್ ಎ. ಬೆನ್ನುಹುರಿ ಅಪಘಾತದ ಕಾರಣ, ಪರಿಣಾಮ ಹಾಗೂ ದ್ವಿತಿಯಾಂತರ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಡಾ. ಅಂಜಲಿ, ನಗರಸಭಾ ಸದಸ್ಯ ವಿಜಯ ಕೊಡವೂರು, ಸೇವಾಭಾರತಿಯ ಕ್ಷೇತ್ರ ಸಂಯೋಜಕ ಶಶಾಂತ್ ಉಪಸ್ಥಿತರಿದ್ದರು.
ಒಟ್ಟು 88 ಮಂದಿ ಜಾಗೃತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.