ಉಡುಪಿ ಜುಲೈ 10: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿವಿಧ ಸೇವೆಗಳಿಗಾಗಿ ಸೇವಾ ಸಿಂಧು ವೆಬ್ ಸೈಟ್ನಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಯುವಕ, ಯುವತಿ, ಸಂಘ, ಕ್ಲಬ್ ಗಳ ನೊಂದಣಿಗಾಗಿ ಅರ್ಜಿ,ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ, ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಾಗಿ ಸೇವಾ ಸಿಂಧುವೆಬ್ ಸೈಟ್ https://sevasindhu.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್ಕುಮಾರ್ ಶೆಟ್ಟಿ ,ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ,ಉಡುಪಿ ಜಿಲ್ಲೆ (0820-2521324,94808-86467) ಇವರನ್ನು ಸಂಪರ್ಕಿಸಲು ಕೋರಿದೆ.