ಉಡುಪಿ :2018-19 ನೇ ಸಾಲಿನಲ್ಲಿ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ( 6 ರಿಂದ 10 ನೇ ತರಗತಿ) ಓದುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರ ಜನವರಿ 1, 2018 ರಿಂದ ಮಾರ್ಚ್ 31, 2019 ರವರೆಗೆ ಕ್ರೀಡಾ ಸಾಧನೆ ಪರಿಗಣಿಸಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವಾಷಿಕ 10000 ರೂ. ಪ್ರೋತ್ಸಾಹಿತ ಕ್ರೀಡಾ ವೇತನ ನೀಡಲಾಗುತ್ತಿದೆ.
ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತ ಕ್ರೀಡಾ ಸಂಸ್ಥೆ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು, ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದವರು, ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಯೊಜನೆಯಡಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಅಥವಾ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡ ಪ್ರತಿನಿಧಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಹ ಅಭ್ಯರ್ಥಿಗಳು ಕಚೇರಿಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಜೂನ್ 30 ರ ಒಳಗೆ ಸಲ್ಲಿಸಬೇಕು. ಆನ್ಲೈನ್ ಮೂಲಕ ಸಲ್ಲಿಸಿದ ಪ್ರಸ್ತಾವನೆಗಳ ಯಥಾಪ್ರತಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಈ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಡಾ. ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2521324, 9480886467 ಅನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.