ಶ್ರೀಕೃಷ್ಣ ಜನ್ಮಾಷ್ಟಮಿ ಸಮಾರೋಪ ಸಮಾರಂಭ; ಸ್ಪರ್ಧಿಗಳಿಗೆ ಬಹುಮಾನ ವಿತರಣೆ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಅಷ್ಟದಿನೋತ್ಸವದ ಸಮಾರೋಪ ಸಮಾರಂಭವು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಿತು.

ಪರ್ಯಾಯ ಶ್ರೀ‌ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಮಾತನಾಡಿ, ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ಆಚಾರ್ಯ ಮಧ್ವರು ಮತ್ತು ಶ್ರೀವಾದಿರಾಜತೀರ್ಥರು ಹಾಕಿಕೊಟ್ಟ ಪರಂಪರೆಯನ್ನು ಮುಂದುವರೆಸಿಕೊಂಡು ದೇವರ ಪೂಜೆಯನ್ನು ವಿವಿಧ ಮುಖಗಳಲ್ಲಿ ಮಾಡುವುದಷ್ಟೇ ನಮ್ಮ ಕೆಲಸ. ಅದನ್ನೂ ಶ್ರೀಕೃಷ್ಣನೇ ಮಾಡಿಸುತ್ತಿದ್ದಾನೆ ಎಂದರು.

ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಬೆಂಗಳೂರಿನ ವಿದ್ವಾನ್ ಬ್ರಹ್ಮಣ್ಯ ಆಚಾರ್ಯ ‘ದಾಸರು ಕಂಡಂತೆ ಶ್ರೀಕೃಷ್ಣ’ಕುರಿತು ವಿಶೇಷ ಪ್ರವಚನ ನೀಡಿದರು.

ಈ ಸಂದರ್ಭದಲ್ಲಿ ಎಲ್ಲಾ ವಿಭಾಗಗಳಲ್ಲಿ ಸ್ಪರ್ಧಿಸಿದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಹುಲಿವೇಷ ಮತ್ತು ಜಾನಪದ ತಂಡಗಳ ಸ್ಪರ್ಧೆಗಳಲ್ಲಿ ವಿಜೇತ ತಂಡ

ಹುಲಿ ವೇಷ ವಿಭಾಗ
ಪ್ರಥಮ ದರ್ಪಣ ಮಹಿಳಾ ತಂಡ
ದ್ವಿತೀಯ ಅಲೆವೂರ್ ಶ್ರೀ ವಿಷ್ಣುಮೂರ್ತಿ ಸೇವಾ ಬಳಗ
ತೃತೀಯ ಕುಂಜಾರು ಗಿರಿ ಬಳಗ

ಜಾನಪದ ವಿಭಾಗ
ಸುಮನಾ ತಂಡ ಪ್ರಥಮ
ಅಕ್ಷತಾ ತಂಡ ದ್ವಿತೀಯ