ಸೆ. 4 ರಂದು ಶ್ರೀ ಕೃಷ್ಣ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆಯು ಸೆಪ್ಟಂಬರ್ 4 ರಂದು ಬೆಳಗ್ಗೆ 10 ಗಂಟೆಗೆ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ಶಾಸಕರುಗಳಾದ ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಕೆ. ಪೂರ್ಣಿಮಾ, ಉಡುಪಿ ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘ (ರಿ) ವಾರಂಬಳ್ಳಿ, ಬ್ರಹ್ಮಾವರ ಇದರ ಅಧ್ಯಕ್ಷ ದಯಾನಂದ ಬಿ.ಆರ್ ಹಾಗೂ ಮತ್ತಿತರರು ಭಾಗವಹಿಸಲಿದ್ದು, ನಿವೃತ್ತ ಪ್ರಾಧ್ಯಾಪಕ ಡಾ. ಶ್ರೀಕಾಂತ್ ಸಿದ್ಧಾಪುರ ಉಪನ್ಯಾಸ ನೀಡಲಿದ್ದಾರೆ.