ಉಡುಪಿ: ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವ, ವಿವಿಧ ಕಾರ್ಯಕ್ರಮಗಳ ಉದ್ಘಾಟನೆ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಜಗದ್ಗುರು ಮೂಲಮಹಾಸಂಸ್ಥಾನಂ ಶ್ರೀಹೃಷಿಕೇಶತೀರ್ಥಪೀಠಮ್ ಪರ್ಯಾಯ ಶ್ರೀಪಲಿಮಾರು ಮಠ ಶ್ರೀಕೃಷ್ಣಮಠದ ಆಶ್ರಯದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಕಾರ್ಯಕ್ರಮಗಳ ಉದ್ಘಾಟನೆಯನ್ನು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು,ಹಾಗೂ ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ  ಉದ್ಘಾಟಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ  ಮಾಜಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್,ವಿದಾನಸಭಾದ ಸದಸ್ಯ ಭೋಜೇಗೌಡ,ಉಡುಪಿ ಶಾಸಕ ರಘುಪತಿ ಭಟ್,ಮಾಜಿ ಸಚಿವ ಪ್ರಮೋದ್ ಮಧ್ವರಾಜ್,ಎನ್.ಎಂ.ಪಿ.ಟಿ.ಅಧ್ಯಕ್ಷ ವೆಂಕಟರಮಣ ಅಕ್ಕರಾಜು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಇತಿಹಾಸ ತಜ್ಞರಾದ ಪ್ರೊ.ಪಾದೂರು ಶ್ರೀಪತಿ ತಂತ್ರಿ,ಕಲಾವಿದರಾದ ಶಮಾಕೃಷ್ಣ,ದುರ್ಗಾoಬಾ ಮೋಟಾರ್ಸ್ ನ ಕೃಷ್ಣಾನಂದ ಚಾತ್ರ, ನಿಟ್ಟೆ ವಿದ್ಯಾಲಯದ ಡಾ.ಅನಂತ ಪದ್ಮನಾಭ ಆಚಾರ್ಯ ಮತ್ತು ಜಿ.ಎಂ.ವಿದ್ಯಾನಿಕೇತನ ಹಾರಾಡಿಯ ಪ್ರಕಾಶ್ಚಂದ್ರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.