ಶ್ರೀ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿ ಬಂಧನ

ಚಿತ್ರದುರ್ಗ: ಶ್ರೀ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ನಿನ್ನೆ ರಾತ್ರಿ ಬಂಧಿಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ 6 ದಿನಗಳ ನಂತರ ಶಿವಮೂರ್ತಿ ಅವರನ್ನು ಬಂಧಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ತಮ್ಮ ಮಠದಿಂದ ನಡೆಸಲ್ಪಡುವ ಹಾಸ್ಟೆಲ್‌ನಲ್ಲಿ ಇಬ್ಬರು ಅಪ್ರಾಪ್ತ ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಇವರ ಮೇಲಿದೆ.

ಶಿವಮೂರ್ತಿಯವರನ್ನು ಬಂಧಿಸುವ ಮುನ್ನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ತಡರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಂತರ ಅವರನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

ಮುರುಘಾ ಶರಣರನ್ನು ಮಧ್ಯಾಹ್ನ 3 ಗಂಟೆಗೆ ಕೋರ್ಟಿಗೆ ಹಾಜರುಪಡಿಸುವಂತೆ ಕೋರಲಾಗಿದ್ದು, ಕೋರ್ಟಿಗೆ ಹಾಜರು ಪಡಿಸದ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳಿಂದ ನ್ಯಾಯಾಲಯ ವಿವರಣೆ ಕೇಳಿದೆ ಎಂದು ವರದಿಯಾಗಿದೆ.