ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ರಾಮನವಮಿ ಆಚರಣೆ

ಉಡುಪಿ: ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ರಾಮನವಮಿ ಪ್ರಯುಕ್ತ ಶ್ರೀದೇವರಿಗೆ ವಿಶೇಷ ಅಲಂಕಾರ, ಭಜನಾ ಕಾರ್ಯಕ್ರಮ, ತೊಟ್ಟಿಲು ಸೇವೆ, ವಸಂತ ಪೂಜೆ, ಅಷ್ಟಾವಧಾನ ಸೇವೆ, ಪಲ್ಲಕಿ ಉತ್ಸವ, ರಾತ್ರಿ ಪೇಟೆ ಉತ್ಸವ ನಡೆಯಿತು. ಧಾರ್ಮಿಕ ಪೂಜಾ ವಿಧಾನಗಳನ್ನು ಅರ್ಚಕ ವಿನಾಯಕ ಭಟ್ ನೆರವೇರಿಸಿದರು. ದೇವಳದ ಆಡಳಿತ ಮೊಕ್ತೇಸರರಾದ ಪಿ ವಿ ಶೆಣೈ, ಜಿ ಎಸ್ ಬಿ, ಯುವಕ ಮಂಡಳಿ, ಮಹಿಳಾ ಮಂಡಳಿಯ ಸದಸ್ಯರು, ಸಮಾಜ ಭಾಂದವರು ಉಪಸ್ಥಿತರಿದ್ದರು.