ಟೆನ್ನಿಕ್ವಾಯಿಟ್ ಪಂದ್ಯಾಟ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ವಿದ್ಯಾಲಯ ಗಂಗೊಳ್ಳಿ ಇದರ ಜಂಟಿ ಆಶ್ರಯದಲ್ಲಿ ಸೆ. 24 ರಂದು ಜರುಗಿದ ಜಿಲ್ಲಾ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಖ್ಯಾತ್ ಮತ್ತು ಮನೀಶ್ ಜಿಲ್ಲಾ ಮಟ್ಟದಲ್ಲಿ ಗೆಲುವು ಸಾಧಿಸಿರಾಜ್ಯ ಮಟ್ಟದಲ್ಲಿ ಕಾಲೇಜನ್ನು ಪ್ರತಿನಿಧಿಸಲು ಸಜ್ಜಾಗಿದ್ದಾರೆ.

ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಇವರಿಂದ ತರಬೇತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.