ರಾಷ್ಟ್ರಮಟ್ಟದ ಹೈಫೈವ್ ಕರಾಟೆ ಚಾಂಪಿಯನ್ ಶಿಪ್: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಾಧನೆ

ಕುಂದಾಪುರ : ಜುಲೈ 15 ಮತ್ತು 16 ರಂದು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಹೈಫೈವ್ – 2023 ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಣಯ್ ಕುಮಿಟೆ ಯಲ್ಲಿ ತೃತೀಯ ಮತ್ತು ಕಟಾ ದಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮೆರೆದಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.