ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ ಭಾವಗೀತೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧಾರಿಣಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.