ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಭಂಡಾರಕಾರ್ಸ್ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ದರ್ಶನ್ 61 ಕೆಜಿ ವಿಭಾಗದಲ್ಲಿ ಸ್ವರ್ಣ ಪದಕ, ಆತ್ಮಕ್ 97 ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಬೆಳ್ಳಿ ಪದಕ, ಆಶ್ರಯ 97 ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಕಂಚಿನ ಪದಕ, ಸಮರ್ಥ 74 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಮುಡಿಗೇರಿಸಿಕೊಂಡಿರುತ್ತಾರೆ. ಈ ಮೂಲಕ ಜಿಲ್ಲಾ ಮಟ್ಟದ ಕುಸ್ತಿ ಚಾಂಪಿಯನ್ಸ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮುವುದರ ಜೊತೆಗೆ ದರ್ಶನ್ ಹಾಗೂ ಆತ್ಮಕ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ್, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಹಾಗೂ ಸಿಬ್ಬಂದಿ ವರ್ಗ ಪ್ರಶಂಶಿಸಿದ್ದಾರೆ.