ತ್ರೋಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ದಸರಾ ಕ್ರೀಡಾಕೂಟ-2022 ರ ತ್ರೋಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರ ತಂಡಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.