ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರ ದಿನ ಆಯೋಜನೆ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿನ.12ರಂದು ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಜರುಗಿದ ವ್ಯವಹಾರ ದಿನವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿ, ಕಲಿಕೆಯ ಹಂತದಲ್ಲಿಯೇ ಪ್ರತಿಯೊಬ್ಬ ವಿದ್ಯಾರ್ಥಿ ಭವಿಷ್ಯದ ಯೋಜನೆಗಳನ್ನು ಸ್ವಯಂ ರೂಪಿಸಿಕೊಳ್ಳುವ ಬದ್ಧತೆಯನ್ನು ಹೊಂದಿದರೆ ಬದುಕಿನಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು.

ಶ್ರೀ ವೆಂಕಟರಮಣ ದೇವ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷ ಕೆ. ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು.

ಮಣಿಪಾಲ್ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಕಾರ್ಯದರ್ಶಿ ಬಿ. ಪಿ. ವರದರಾಯ್ ಪೈ, ಶ್ರೀ ವೆಂಕಟರಮಣ ದೇವ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ, ಆಡಳಿತ ಮಂಡಳಿ ಟ್ರಸ್ಟಿ ರತ್ನಾಕರ ಶೆಣೈ , ವೆಂಕಟರಮಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್ , ಪ್ರೌಢಶಾಲೆ ಮುಖ್ಯ ಶಿಕ್ಷಕ ಕೃಷ್ಣ ಅಡಿಗ , ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ ಸ್ವಾಗತಿಸಿದರು, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸವಿತಾ ರಮೇಶ್ ಪ್ರಾಸ್ತವಿಕವಾಗಿ ಮಾತನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ್, ವಾಣಿಜ್ಯಶಾಸ್ತ್ರ ಉಪನ್ಯಾಸಕ ಸುಶಾಂತ್.ಎಸ್. ನಾಯಕ್ ಕೆ. ಜಯಪ್ರಕಾಶ್ ಹೆಗ್ಡೆ ಮತ್ತು ಬಿ. ಪಿ. ವರದರಾಯ್ ಪೈ ಅವರನ್ನು ಪರಿಚಯಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ನಿರೂಪಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ವಿಶ್ವೇಶ್ ವಂದಿಸಿದರು.

ಉಪನ್ಯಾಸಕರ ಮಾರ್ಗದರ್ಶನ ಪಡೆದು, ತೆರೆದಿದ್ದ ವ್ಯಾಪಾರಿ ಮಳಿಗೆಗಳಲ್ಲಿ ವಿವಿಧ ಮಾರಾಟ ವಸ್ತುಗಳನ್ನು ಇಟ್ಟು ವಿದ್ಯಾರ್ಥಿಗಳು ಭರ್ಜರಿ ವ್ಯಾಪಾರ ನಡೆಸಿದರು.